Friday, October 3, 2025
Friday, October 3, 2025

ಕಾಶಿಗೆ ಧಾರ್ಮಿಕ ಪ್ರವಾಸ; ದೇಸಿ ಪ್ರವಾಸಿಗರ ಸಂಖ್ಯೆಯಲ್ಲಿ ಶೇ. 77 ರಷ್ಟು ಏರಿಕೆ, ವಿದೇಶಿ ಪ್ರವಾಸಿಗರು ಶೇ. 34 ರಷ್ಟು ಏರಿಕೆ

ವಾರಣಾಸಿಯು ಧಾರ್ಮಿಕ ಪ್ರವಾಸಿಗರ ನೆಚ್ಚಿನ ತಾಣವಾಗಿ ರೂಪುಗೊಂಡಿದ್ದು, ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. 2025 ರ ಮೊದಲ ತ್ರೈಮಾಸಿಕದಲ್ಲಿ ದೇಶೀಯ ಪ್ರವಾಸಿಗರ ಸಂಖ್ಯೆ ಶೇ. 77.59 ರಷ್ಟು ಹೆಚ್ಚಾಗಿದ್ದು, 11.46 ಕೋಟಿ ಪ್ರವಾಸಿಗರು ಭೇಟಿ ಮಾಡಿರುವುದಾಗಿ ದಾಖಲಾಗಿದೆ.

ವಾರಣಾಸಿ: ಭಾರತದ ಧಾರ್ಮಿಕ ಸ್ಥಳಗಳಲ್ಲಿ ಪ್ರಮುಖವಾದುದು ವಾರಣಾಸಿ. ವಾರಣಾಸಿ, ಕಾಶಿ, ಬನಾರಸ್ ಎಂಬ ಹೆಸರುಗಳಿಂದ ಜನಪ್ರಿಯವಾಗಿರುವ ಈ ನಗರವನ್ನು ಹಿಂದೂಗಳು ಅತ್ಯಂತ ಪವಿತ್ರಸ್ಥಾನವನ್ನಾಗಿ ಪರಿಗಣಿಸುತ್ತಾರೆ. ಪ್ರಪಂಚದ ಅತ್ಯಂತ ಹಳೆಯ ಮತ್ತು ಇಂದಿಗೂ ಜನವಸತಿಯಿಂದ ಕೂಡಿದ ನಗರಗಳಲ್ಲಿ ಇದೂ ಒಂದು. ಗಂಗಾ ನದಿಯ ತಟದಲ್ಲಿರುವ ಈ ನಗರವನ್ನು ವರುಣಾ ಮತ್ತು ಅಸಿ ಎಂಬ ನದಿಗಳು ಸುತ್ತುವರೆದಿವೆ. ಈ ನಗರಕ್ಕೆ ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ.

360_F_268991837_FvQbODmbqMoeLWb0ffBxdJpEVAaOHciM

ಕಳೆದ ವರ್ಷಕ್ಕೆ ಹೋಲಿಸಿದರೆ 2025 ರ ಮೊದಲ ತ್ರೈಮಾಸಿಕದಲ್ಲಿ ದೇಶೀಯ ಪ್ರವಾಸಿಗರ ಸಂಖ್ಯೆಯಲ್ಲಿ ಶೇ. 77 ರಷ್ಟು ಏರಿಕೆಯೊಂದಿಗೆ ಕಾಶಿ ಭಾರತೀಯ ಪ್ರವಾಸಿಗರಿಗೆ ಪ್ರಮುಖ ತಾಣಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಅಲ್ಲದೆ ವಿದೇಶಿ ಪ್ರವಾಸಿಗರ ಸಂಕಯೆಯಲ್ಲೂ ಸಹ ಶೇ. 34 ರಷ್ಟು ಏರಿಕೆ ದಾಖಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಮಾಹಿತಿಯ ಪ್ರಕಾರ, 2024 ರಲ್ಲಿ ಜನವರಿಯಿಂದ ಮಾರ್ಚ್‌ ವರೆಗಿನ ಪ್ರವಾಸಿಗರ ಭೇಟಿಯನ್ನು ಹೋಲಿಸಿದರೆ 2025 ರ ಮೊದಲ ತ್ರೈಮಾಸಿಕದಲ್ಲಿ (ಜನವರಿಯಿಂದ ಮಾರ್ಚ್ ವರೆಗೆ) ವಾರಣಾಸಿಗೆ ಭಾರತೀಯ ಪ್ರವಾಸಿಗರ ಸಂಖ್ಯೆ 77.59% ರಷ್ಟು ಹೆಚ್ಚಾಗಿದೆ. ಈ ಸಮಯದಲ್ಲಿ ವಿದೇಶಿ ಪ್ರವಾಸಿಗರ ಆಗಮನವು 34.21% ರಷ್ಟು ಗಮನಾರ್ಹ ಏರಿಕೆ ಕಂಡಿದೆ.

kashi-large

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಜೇಂದ್ರ ರಾವತ್ ಅವರ ಪ್ರಕಾರ, 2024 ರ ಜನವರಿಯಿಂದ ಮಾರ್ಚ್ ವರೆಗೆ ಕಾಶಿಗೆ 2.56 ಕೋಟಿ ಪ್ರವಾಸಿಗರು ಆಗಮಿಸಿದ್ದಾರೆ. 2025 ರ ಮೊದಲ ಮೂರು ತಿಂಗಳಲ್ಲಿ ಈ ಸಂಖ್ಯೆ 11.46 ಕೋಟಿಗೆ ಏರಿದೆ. 2024 ರಲ್ಲಿ 98,961 ಕ್ಕಿಂತ ಹೆಚ್ಚು ಇದ್ದ ವಿದೇಶಿ ಪ್ರವಾಸಿಗರ ಸಂಖ್ಯೆ 2025 ರಲ್ಲಿ 1.5 ಲಕ್ಷಕ್ಕೆ ಏರಿಕೆಯಾಗಿದೆ.

ಗಮನಿಸಬೇಕಿರುವ ಅಂಶವೆಂದರೆ, ಕಾಶಿ ನಗರದ ಆಧ್ಯಾತ್ಮಿಕ ಸೆಳೆತ ಜೊತೆಗೆ ಘಾಟ್‌ಗಳ ನವೀಕರಣ, ರಸ್ತೆಗಳನ್ನು ಅಭಿವೃದ್ಧಿಪಡಿಸಿರುವುದು ಮಾತ್ರವಲ್ಲದೆ ಆಧುನಿಕ ಸೌಕರ್ಯಗಳನ್ನು ಕಲ್ಪಿಸಿರುವುದು ಕಾಶಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣಲು ಕಾರಣವಾಗಿದೆ.

Bhagya Divana

Bhagya Divana

Bhagya Divana is a Professional Journalist. Working in Pravasi Prapancha.

ಕೃಷ್ಣ-ಸುಧಾಮರ ಸ್ನೇಹದ ಗುರುತು ಬೇಟ್ ದ್ವಾರಕಾ

Read Previous

ಕೃಷ್ಣ-ಸುಧಾಮರ ಸ್ನೇಹದ ಗುರುತು ಬೇಟ್ ದ್ವಾರಕಾ

ವಿಹಂಗಮ ಸಂಗಮ

Read Next

ವಿಹಂಗಮ ಸಂಗಮ